ಬೆಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ- 2024 ಅನ್ನು ನಿನ್ನೆ ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ಇದನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ವಿಧೇಯಕದಲ್ಲಿರುವ, ದೇವಾಲಯಗಳ ಆದಾಯದಲ್ಲಿ ತೆರಿಗೆ ಸಂಗ್ರಹಿಸುವ ನಿಯಮದ ಬಗ್ಗೆ ಬಿಜೆಪಿಗರು ಆಕ್ಷೇಪಿಸಿದ್ದು, ಕಾಂಗ್ರೆಸ್ ಸರ್ಕಾರವನ್ನು “ಹಿಂದೂ ವಿರೋಧಿ ಎಂದು ಕರೆದಿದ್ದಾರೆ.
ರಾಜ್ಯದಲ್ಲಿ ಸರಣಿ ರೂಪದಲ್ಲಿ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬರಿದಾಗಿರುವ ಬೊಕ್ಕಸದಿಂದ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲೆಯೂ ವಕ್ರದೃಷ್ಟಿ ಬೀರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟಿಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲು ವಕ್ರದೃಷ್ಟಿ ಬೀರಿ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ಬುದ್ಧಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ ಎಂದು ಕಿಡಿಕಾರಿದ್ದಾರೆ.
ಅದರ ಅನುಸಾರ ಇನ್ನು ಮುಂದೆ ಒಂದು ಕೋಟಿ ರೂಪಾಯಿಗೂ ಆದಾಯ ಮೀರಿದ ದೇವಸ್ಥಾನಗಳ ಆದಾಯ ಶೇಕಡ 10 ರಷ್ಟು ಹಣವನ್ನು ಸರ್ಕಾರ ಬಾಚಿಕೊಳ್ಳಲಿದೆ ಇದು ದರಿದ್ರತನವಲ್ಲವೇ ಬೇರೇನು ಅಲ್ಲ, ದೇವರ ಆದಾಯಕ್ಕೆ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಭಕ್ತರು ಸಮರ್ಪಿಸುವ ಕಾಣಿಕೆ ದೇವಸ್ಥಾನದ ಜಿನೋದಾರಕ್ಕೆ ಹಾಗೂ ಭಕ್ತರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ಕೆ ವಿನಿಯೋಗವಾಗಬೇಕು.
ಹೊರೆತು ಅದು ಬೇರೆ ಎಂದು ಕಾರ್ಯಕ್ರಮಕ್ಕೆ ವಿನಿಯೋಗವಾದರೆ ಜನರ ದೈವ ನಂಬಿಕೆಗಳ ಮೇಲೆ ನಡೆಯುವ ದೌರ್ಜನ್ಯ ಎಂದು ತಿಳಿಸಿದರು. ಇತರ ಧರ್ಮಗಳ ಆದಾಯದ ಮೇಲಿಲ್ಲದ ಕಣ್ಣು ಹಿಂದೂ ದೇವಾಲಯಗಳ ಮೇಲೆ ಮಾತ್ರ ಏಕೆ ಎಂಬುವುದು ಕೋಟಿ ಭಕ್ತರ ಪ್ರಶ್ನೆಯಾಗಿದೆ. ಭಕ್ತರ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಪಾಲು ಕಸಿಯುವ ಬದಲು ಸರ್ಕಾರ ನಡೆಸಲು ನೇರವಾಗಿ ಎಂದು ದೇವಸ್ಥಾನಗಳ ಬಳಿ ಗೋಲಕ್ಕಗಳನ್ನಿಡಲಿ ಸಹನುಭೂತಿ ಮನಸ್ಸಿನ ಭಕ್ತರು ನಿಮ್ಮ ಸರ್ಕಾರಕ್ಕೆ ಕಾಣಿಕೆ ನೀಡಲು ನೀಡಲುಬಹುದೇ ಎಂದು ತಿಳಿಸಿದ್ದಾರೆ.