ಬಿಜೆಪಿಗೆ ಸುಮಲತಾ ಬಂದರೆ ಸ್ವಾಗತ: ಬಿ ಎಸ್ ವೈ

ಬಿಜೆಪಿಗೆ ಸುಮಲತಾ ಬಂದರೆ ಸ್ವಾಗತ: ಬಿ ಎಸ್ ವೈ

ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.

ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾದರೆ ಸ್ವಾಗತಿಸುತ್ತೇನೆ. ಆದರೆ ನಾವಾಗಿಯೇ ಅವರನ್ನು ಆಹ್ವಾನಿಸುವುದಿಲ್ಲ. ಅವರು ಸ್ವಯಂಪ್ರೇರಿತರಾಗಿ ಬಂದರೆ ಸ್ವಾಗತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 29ಕ್ಕೆ ರಾಜ್ಯದ ಸಂಸದರೊಂದಿಗೆ ದೆಹಲಿಗೆ ಹೋಗಲಿದ್ದೇನೆ. ಆ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗುವುದು ಎಂದರು. ನಾನು 40 ವರ್ಷಗಳ ಕಾಲ ರಾಜ್ಯದಲ್ಲಿ ನಿರಂತರ ಸುತ್ತಾಟ ನಡೆಸಿ ಅನುಭವ ಪಡೆದಿದ್ದೇನೆ. ಹಾಗಾಗಿ ಮೈತ್ರಿ ಸರ್ಕಾರದ ಭವಿಷ್ಯದ ಬಗ್ಗೆ ಸದ್ಯ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos