ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ.

ನೇಹಾ ಹಿರೇಮಠ ಕೊಲೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಲೋಕಸಮರದ ಹೊಸ್ತಿಲಲ್ಲಿ ಕಾಂಗ್ರೆಸ್ ವಿರುದ್ಧ ಹುಬ್ಬಳ್ಳಿಯ ನೇಹಾ ಹತ್ಯೆಯನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಲು ಮುಂದಾಗಿರುವ ಬಿಜೆಪಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತಂತೆ ರಾಜ್ಯ ಬಿಜೆಪಿ ಎಕ್ಸ್​​ ಖಾತೆಯಲ್ಲಿ ಘೋಷಿಸಿದೆ.

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮ‌ಠ ಹತ್ಯೆ ಖಂಡಿಸಿ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos