ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿರುವ ಅವರ ವಿಚಾರಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಸಿಡಿದಿದೆ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಘಟನೆ ಇಂದು ನಡೆದಿದೆ.
ಕಾಂಗ್ರೆಸ್ ನಾಯಕರ ಬೆಂಬಲಿತ ವಿಧಾನಸೌಧದಲ್ಲಿ ಪಾಕಿಸ್ತಾನ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ, ಇದರ ವಿರುದ್ಧ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತ ಜಮಾಯಿಸಿದರು ಅವರೆಲ್ಲರೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು ಧಿಕ್ಕಾರ ಕೂಗುತಾ ಕಚೇರಿಗೆ ಯತ್ನ ಗುಂಪು ಗುಂಪಾಗಿ ಬಂದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಹರಸಹಾಸ ಪಟ್ಟರು ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿಕೊಂಡು ಕಚೇರಿಯಿಂದ ಧಿಕ್ಕಾರ ಕೂಗುತ್ತಲೇ ಕಾರ್ಯಕರ್ತರು ಓಡುತ್ತಿದ್ದಾರೆ.
ಮುತ್ತಿಗೆ ಯತ್ನ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ ಮಾತಿನ ಚಕ್ಕಮಕ್ಕಿ ನಡೆಯಿತು. ಈ ಪ್ರತಿಭಟನೆ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಸ್ಥಳ ಮಟ್ಟಿಗೆ ಹೋಗದಂತೆ ಪೊಲೀಸರು ತಡೆಯುವಲ್ಲಿ ಯಶಸ್ವಿಯಾದರು.
ಪೊಲೀಸರ ಈ ಬಂಧನ ನಡೆಯನ್ನು ಬಿಜೆಪಿ ಕಾರ್ಯಕರ್ತರು ಖಂಡಿಸಿದರು ದೇಶದ್ರೋಹ ಕೆಲಸ ಮಾಡಿದವರನ್ನು ಬಂಧಿಸದ ಕಾಂಗ್ರೆಸ್ ಸರ್ಕಾರ ದೇಶಭಕ್ತರನ್ನು ಬಂಧಿಸುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು.