ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ

ನವದೆಹಲಿ, ಜ. 20: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಯಪ್ರಕಾಶ್ ನಡ್ಡಾ ನೇಮಕವಾಗಿದ್ದಾರೆ. ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಮಿತ್ ಶಾ ಅವರ ರಾಜ್ಯಾಧ್ಯಕ್ಷ ಅವಧಿ ಅಂತ್ಯವಾಗುವ ಹಿನ್ನೆಲೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ನಾಯಕರನ್ನ ಆಯ್ಕೆ ಮಾಡಲು ಬಿಜೆಪಿ ಮುಂದಾಗಿತ್ತು.

ಕೆಲವು ದಿನಗಳ ಹಿಂದೆಯೇ ಜೆ.ಪಿ. ನಡ್ಡಾ ಅವರು ಮುಂದಿನ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿತ್ತು. ಇದೀಗ ಊಹೆಯಂತೆಯೇ ಜೆ.ಪಿ. ನಡ್ಡಾ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಒಲಿದುಬಂದಿದೆ. ಜೆ.ಪಿ. ನಡ್ಡಾ ಅವರಿಗೆ ಇಂದೇ ಅಧಿಕಾರ ಹಸ್ತಾಂತರ ಮಾಡಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos