ಪೈಲ್ವಾನ್ ಪೋಸ್ಟರ್ಗೆ ರಕ್ತಾಭಿಷೇಕ

ದಾವಣಗೆರೆ, ಸೆ.12:  ಕಿಚ್ಚ ಸುದೀಪ್ ಅವರ ನಟನೆಯ ಬಹುನಿರೀಕ್ಷಿತ ಚಿತ್ರ ‘ಪೈಲ್ವಾನ್  ಇಂದು ಬಿಡುಗಡೆ ಆಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಸುದೀಪ್ ಅವರ ಪೋಸ್ಟರ್ಗೆ ಕುರಿ ಕಡಿದು ರಕ್ತಾಭಿಷೇಕ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಈ ದೃಶ್ಯವು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜಗಳೂರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲೇ ಬೋರನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಭಿಮಾನಿಗಳು ನಡೆಸಿದ್ದ ಈ ಕೃತ್ಯಕ್ಕೆ ಕಿಚ್ಚ ಸುದೀಪ್ ಟ್ವಿಟ್ಟರಿನಲ್ಲಿ, “ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವುದು ನಿಜಕ್ಕೂ ಅಮಾನವೀಯ. ನಾನು ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತೇನೆ ದಯವಿಟ್ಟು ಇದನ್ನು ನಿಲ್ಲಿಸಿ ದಯವಿಟ್ಟು ಪ್ರಾಣಿಗಳನ್ನು ಬಲಿ ಕೊಡುವುದನ್ನು ನಿಲ್ಲಿಸಿ”ಎಂದು ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇನ್ನ, ದಾವಣಗೆರೆಯ ಗೀತಾಂಜಲಿ, ವಸಂತ ಚಿತ್ರಮಂದಿರದಲ್ಲಿ ಪೈಲ್ವಾನ್ ಚಿತ್ರ ಪ್ರದರ್ಶನ ಆಗುತ್ತಿದೆ. ಸುದೀಪ್ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಬೃಹತ್ ಕಟೌಟ್ಗೆ ಹಾರ ಹಾಕಿ ಸಂಭ್ರಮಿಸಿದ್ದಾರೆ. ಅಲ್ಲದೆ ಸುದೀಪ್ ಅಭಿಮಾನಿ ಸಂಘ ದಾವಣಗೆರೆಯ ಪ್ರಮುಖ ಪೈಲ್ವಾನ್ಗಳನ್ನು ಚಿತ್ರಮಂದಿರಕ್ಕೆ ಕರೆಸಿ ಸನ್ಮಾನ ಮಾಡುವ ಮೂಲಕ ವಿಭಿನ್ನವಾಗಿ ಸಂಭ್ರಮಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos