ಮಂಗಳೂರಿನಲ್ಲಿ ಬಾಂಬ್ ಪತ್ತೆ: ಇಬ್ಬರು ವ್ಯಕ್ತಿಗಳ ವಿಚಾರಣೆ?

ಮಂಗಳೂರಿನಲ್ಲಿ ಬಾಂಬ್ ಪತ್ತೆ: ಇಬ್ಬರು ವ್ಯಕ್ತಿಗಳ ವಿಚಾರಣೆ?

ಮಂಗಳೂರು, ಜ. 20: ಬಂದರು ನಗರಿ ಮಂಗಳೂರಿನ ಏರ್ಪೋರ್ಟ್ ಪಾರ್ಕಿಂಗ್ ಏರಿಯಾ ಬಳಿ 10 ಕೆಜಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ರೇಲ್ವೇ ಪೊಲೀಸರು ವಿಚಾರಣೆಗೆ ಒಳ ಪಡಿಸಿದ್ದಾರೆ ಎನ್ನಲಾಗ್ತಿದೆ. ಸಿಸಿ ಟಿವಿ ದೃಶ್ಯಗಳನ್ನು ಆಧರಿಸಿ ಇಬ್ಬರು ವ್ಯಕ್ತಿಗಳನ್ನು ಸಂಪರ್ಕಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರಂತೆ.

ಇನ್ನು ಮಂಗಳೂರು ಕೇಂದ್ರ ರೇಲ್ವೇ ನಿಲ್ದಾಣದಲ್ಲಿ ಇಬ್ಬರು ಅನುಮಾನಸ್ಪಾದವಾಗಿ ತಿರುಗಾಡುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ, ಈ ಬಗ್ಗೆ ಇನ್ನಷ್ಟೇ ಮತ್ತಷ್ಟು ಮಾಹಿತಿ ಹೊರಬರಬೇಕಿದೆ.

 

ಫ್ರೆಶ್ ನ್ಯೂಸ್

Latest Posts

Featured Videos