ಬಾಂಬರ್ ಮಂಗಳೂರು ಪೊಲೀಸರ ವಶಕ್ಕೆ

ಬಾಂಬರ್ ಮಂಗಳೂರು ಪೊಲೀಸರ ವಶಕ್ಕೆ

ಬೆಂಗಳೂರು, ಜ. 22: ಮಂಗಳೂರು ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ, ಲ್ಯಾಪ್ ಟಾಪ್ ಬ್ಯಾಗ್ ನಲ್ಲಿ ಬಾಂಬ್ ಪತ್ತೆ ಪ್ರಕರಣದ ಪ್ರಮುಖ ಆರೋಪಿ ಮಣಿಪಾಲದ ಆದಿತ್ಯ ರಾವ್, ಡಿಜಿ-ಐಜಿ ಮುಂದೆ ಶರಣಾಗಿದ್ದನು. ಇಂತಹ ಆರೋಪಿಯನ್ನು ಬೆಂಗಳೂರಿನ ಪೊಲೀಸರು ನಗರ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆನಂತ್ರ ಹಲಸೂರು ಗೇಟ್ ಪೋಲೀಸ್ ಠಾಣೆಗೆ ಮರಳಿ ಕರೆತರಲಾಯಿತು.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಸಂಬಂಧ ಬಾಂಬ್ ಇಟ್ಟಿದ್ದಂತ ಆರೋಪಿ ಆದಿತ್ಯ ರಾವ್, ಪೊಲೀಸರ ಮುಂದೆ ಶರಣಾಗಿದ್ದನು. ಇಂತಹ ಆರೋಪಿಯನ್ನು ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಆನಂತ್ರ ಅವರನ್ನು ಮಂಗಳೂರು ಪೊಲೀಸರ ವಶಕ್ಕೆ ಹಲಸೂರು ಗೇಟ್ ಪೊಲೀಸರು ನೀಡಿದ್ದರು. ಇಂತಹ ಆರೋಪಿಯನ್ನು ಮಂಗಳೂರು ಪೊಲೀಸರು ನಗರದ 1ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಇದೀಗ ನ್ಯಾಯಾಲಯ ಆರೋಪಿಯನ್ನು ಮಂಗಳೂರು ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಇದೇ ವೇಳೆ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಆರೋಪಿಯನ್ನು ತಮ್ಮ ವಶಕ್ಕೆ ಪಡೆಯಲು ಮಂಗಳೂರು ಪೊಲೀಸರು ಕೂಡ ಆಗಮಿಸಿದ್ದರು. ಇಂತಹ ಪೊಲೀಸರ ವಶಕ್ಕೆ ಬೆಂಗಳೂರು ಪೊಲೀಸರು ನೀಡಿದರು. ಈ ಆರೋಪಿಯನ್ನು ನಗರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲವಾಯಿತು. ಇದೀಗ ಆರೋಪಿಯನ್ನು ನ್ಯಾಯಾಲಯ ಮಂಗಳೂರು ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಆರೋಪಿ ಆದಿತ್ಯ ರಾವ್ ಪೊಲೀಸರ ವಶಕ್ಕೆ ನೀಡಲಾಗಿದೆ. ಇಂತಹ ಆರೋಪಿಯನ್ನು ನಾಳೆ 5.30ರ ಒಳಗಾಗಿ ಮಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸುವಂತೆ ಸೂಚಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos