ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಸಿಕ್ಕಿಲ್ಲ: ಬೊಮ್ಮಾಯಿ

ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಸಿಕ್ಕಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ಸೋಲಿನ ಭೀತಿಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ ಮತ್ತು ಸರ್ಕಾರದ ಸಚಿವರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಬೃಹತ್ ಪಕ್ಷವಾಗಿ 133 ಸ್ಥಾನ ಗೆದ್ದು ಹೊರ ಹೊಮ್ಮಿರುವ ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಸಿಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೇವಡಿ ಮಾಡಿದರು.

ನೆನ್ನೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಹಳೆಯ ಪಾರ್ಟಿ , ರಾಜ್ಯದಲ್ಲಿ 133 ಸ್ಥಾನ ಗೆದ್ದಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ಸ್ಥಾನ ಪಡೆದರುವ ಕಾಂಗ್ರೆಸ್ ಅಧಿಕಾರದಲ್ಲಿದೆ. ಹೀಗಿದ್ದರೂ ಸಹ ಅವರಲ್ಲಿ ಲೋಕಸಭೆಗೆ ಅಭ್ಯರ್ಥಿಗಳು ಸಿಕ್ಕಿಲ್ಲ.

ಹಾಲಿ ಮಂತ್ರಿಗಳು ಲೋಸಕಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಮಂತ್ರಿಗಳ ಮನೆಯವರನ್ನ ಚುನಾವಣೆಗೆ ನಿಲ್ಲಿಸುವ ದುಸ್ಥಿತಿ ಕಾಂಗ್ರೆಸ್‌ಗೆ ಬಂದಿದೆ. ಕಾಂಗ್ರೆಸ್‌ನಿಂದ ಈಗ ಟಿಕೆಟ್ ಪಡೆದಿರುವ ಅಭ್ಯರ್ಥಿಗಳಿಂದ ಏನೂ ಪ್ರಯೋಜನವಿಲ್ಲ. ಆಯಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos