ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ರಾಜ್ಯದಲ್ಲಿ  ಲೋಕಸಭೆಯ ಚುನಾವಣೆ ಅಖಾಡ ರಂಗೇರಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಅದರಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಾವೇರಿ-ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಿದರು.

ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು‌. ಮಾಜಿ ಸಚಿವ ಬಿ.ಸಿ. ಪಾಟೀಲ, ಶಾಸಕ ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದರು.

ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬೊಮ್ಮಾಯಿ ಏಪ್ರೀಲ್ 19ರಂದು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos