ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗಿದೆ: ಬೊಮ್ಮಾಯಿ

ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗಿದೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿಗಳನ್ನು ನೀಡಿತ್ತು, ಈ ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ಅದ್ದೂರಿಯಾಗಿ ಚಾಲನೆ ನೀಡಿದ್ದಾರೆ. ಈ ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿ-ಜೆಡಿಎಸ್‌ ನಾಯಕರು ಕಿಡಿಕಾರುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಪೂರ್ವಸಿದ್ಧತೆ ಇಲ್ಲದ ಗ್ಯಾರಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ಈಗ ಚೊಂಬು ತೋರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಳೆದ ಹತ್ತು ವರ್ಷಗಳ ಎನ್‌ಡಿಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಪೂರ್ವ ಸಿದ್ದತೆ ಇಲ್ಲದ ಗ್ಯಾರಂಟಿಗಾಗಿ ದಿವಾಳಿ ರಾಜ್ಯ ಸರ್ಕಾರ ದಿವಾಳಿ ಆಗಿದೆ. ಗ್ಯಾರಂಟಿಗಳಿಗೆ 54 ಸಾವಿರ ಕೋ. ರೂ. ವೆಚ್ಚ ಆಗುತ್ತದೆ. ತನ್ನ ವೈಫಲ್ಯವನ್ನು ಮರೆಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆ ಜತೆಗೆ ರಾಜ್ಯ ಸರಕಾರವೂ ರೈತರಿಗೆ 4 ಸಾವಿರ ರೂ. ನೀಡುತ್ತಿತ್ತು. ರಾಜ್ಯ ಸರಕಾರ ಅದನ್ನು ಕಡಿತ ಮಾಡಿ, ರೈತರಿಗೆ ಚೊಂಬು ಕೊಟ್ಟಿದ್ದಾರೆ. ನಮ್ಮ ಸರಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 13 ಲಕ್ಷ ರೂ. ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಕೊಡಲಾಗಿತ್ತು, ಅದನ್ನು ನಿಲ್ಲಿಸಿದ್ದಾರೆ.

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಎಸ್‌ಸಿಪಿ-ಟಿಎಸ್‌ಪಿಯ 11,380 ಕೋ. ರೂ. ಎಸ್ಸಿಎಸ್ಟಿ ಅನುದಾನವನ್ನ ಗ್ಯಾರಂಟಿಗೆ ಬಳಸಿಕೊಂಡಿದ್ದಾರೆ. ಇದೆಲ್ಲ ಮಾಡಿ ರಾಜ್ಯದ ಜನತೆಗೆ ಚೊಂಬು ಕೊಟ್ಟಿದ್ದು ರಾಜ್ಯ ಸರ್ಕಾರ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos