ಜ್ಞಾನ ವಿಕಾಸಕ್ಕೆ ಪುಸ್ತಕಗಳೇ ದಾರಿ ದೀಪ

ಜ್ಞಾನ ವಿಕಾಸಕ್ಕೆ ಪುಸ್ತಕಗಳೇ ದಾರಿ ದೀಪ

ಪಾವಗಡ: ಪುಸ್ತಕಗಳು ಜ್ಞಾನ ವಿಸ್ತಾರಕ್ಕೆ ಪೂರಕವಾಗಿದ್ದು, ವಿಚಾರವಂತಿಕೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ ಹೇಳಿದರು.

ಪಟ್ಟಣದ ತುಮಕೂರು ರಸ್ತೆಯ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ರವರ 64 ನೇ ಮಹಾಪರಿನಿರ್ವಾಣ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಮತ್ತು ಗಾಂಧೀಜಿ ಅವರ ತತ್ವಾದರ್ಶಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕೆಂದರು.

ಪಟ್ಟಣದಲ್ಲಿ ಇರುವ ಅಂಬೇಡ್ಕರ್ ಭವನದಲ್ಲಿ ಗ್ರಂಥಾಲಯ ಮಾಡಿ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಪುಸ್ತಕಗಳನ್ನು ಓದುವ ಸಂಸ್ಕೃತಿ ಹೆಚ್ಚಾಗುತ್ತದೆ ಪುರಸಭೆ ವತಿಯಿಂದ ಗ್ರಂಥಾಲಯ ಮಾಡಬಾಹುದು ಅಂಬೇಡ್ಕರ್ ಅವರು ದಿನಕ್ಕೆ 18 ಗಂಟೆಗಳ ಕಾಲ ಪುಸ್ತಕಗಳ ಅಧ್ಯಯನ ಮಾಡುತ್ತಿದ್ದರು. ಸದಾ ಗ್ರಂಥಾಲಯದಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಉತ್ತಮ ವ್ಯಕ್ತಿತ್ವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುವ ಪುಸ್ತಕಗಳು ಜ್ಞಾನ ಕೇಂದ್ರಗಳು. ಜ್ಞಾನಪರಿಧಿಯನ್ನು ವಿಸ್ತರಿಸಲು ಸಹಕಾರಿಯಾಗಿರುವ ಪುಸ್ತಕಗಳನ್ನು ಓದುವ ಸಂಸ್ಕೃತಿ ಹೆಚ್ಚಾಗುವ ಅಗತ್ಯವಿದೆ ಹಳ್ಳಿಗಳಲ್ಲಿ ಇರುವ ಅಂಬೇಡ್ಕರ್ ಭವನಗಳಲ್ಲಿ ಇದೇ ತರಹ ಗ್ರಂಥಾಲಯ ಪುಸ್ತಕ ಭಂಡಾರ ಮಾಡಬೇಕು ಎಂದು ಹೇಳಿದರು

ಫ್ರೆಶ್ ನ್ಯೂಸ್

Latest Posts

Featured Videos