ಕಾಶ್ಮೀರ ದಾಳಿ; Pak ಗೆ ಸಿಂಧೂ ನದಿ ನೀರು ಒಪ್ಪಂದಕ್ಕೆ ಬ್ರೇಕ್!

ಕಾಶ್ಮೀರ ದಾಳಿ; Pak ಗೆ ಸಿಂಧೂ ನದಿ ನೀರು ಒಪ್ಪಂದಕ್ಕೆ ಬ್ರೇಕ್!

ನವದೆಹಲಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಗೊತ್ತಾಗುತ್ತಿದ್ದಂತೆ ಭಾರತ ಪಾಕಿಸ್ತಾನದ ವಿರುದ್ಧ ಕೆಂಡಮಂಡಲವಾಗಿದ್ದು, ಪಾಕಿಸ್ತಾನ ಸರ್ಕಾರದ ವಿರುದ್ಧ ಭಾರತವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಹೌದು, ಕಾಶ್ಮೀರದ ಉಗ್ರ ದಾಳಿಯಿಂದಾಗಿ ದೇಶದ ಹಲವು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಸಭೆ ಕರೆದು ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.

ಕಾಶ್ಮೀರದಲ್ಲಿ ನಡೆದ ಉಗ್ರರ ಭೀಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬುಧವಾರ ಏ. 23 ರಂದು ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಮೋದಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಹಲವು ತೀರ್ಮಾನಕ್ಕೆ ಬರಲಾಗಿದೆ. ಇದನ್ನೂ ಓದಿ:

ಮಹತ್ವದ ನಿರ್ಧಾರಗಳು

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಮುಚ್ಚುವುದ,

ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು

ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು.

ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಮಲಾ ಸೀತಾರಾಮನ್‌, ಎಸ್‌. ಜೈಶಂಕರ್‌ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ತೀರ್ಮಾನ ಮಾಡಲಾಗಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್‌ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದೆ. ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್‌ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಅಟ್ಟಾರಿ-ವಾಘಾ ಗಡಿ ಮುಚ್ಚಲು ಭಾರತ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos