ಬ್ರಿಟನ್ ಪ್ರಧಾನಿಯಾಗಿ ಜಾನ್ಸನ್ ಆಯ್ಕೆ

ಬ್ರಿಟನ್ ಪ್ರಧಾನಿಯಾಗಿ ಜಾನ್ಸನ್ ಆಯ್ಕೆ

ಲಂಡನ್, ಡಿ. 13 : ಬೋರಿಸ್ ಜಾನ್ಸನ್ ಮತ್ತೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಬ್ರಿಟನ್ ಸಂಸತ್ತಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಾರ್ಟಿ ಭರ್ಜರಿ ಜಯ ಸಾಧಿಸಿದ್ದು, ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿನ ಹಾಲಿ ಫಲಿತಾಂಶದ ಅನ್ವಯ ಒಟ್ಟು 650 ಸ್ಥಾನಗಳ ಪೈಕಿ 600 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಕ್ಷ 326 ಸ್ಥಾನಗಳನ್ನು ಗಳಿಸಿಕೊಂಡಿದ್ದು, ಕಳೆದ ಬಾರಿಯ ಚುನಾವಣೆಗೆ ಹೋಲಿಕೆ ಮಾಡಿದರೆ ಕನ್ಸರ್ವೇಟಿವ್ ಪಕ್ಷ ಈಗಾಗಲೇ 43 ಹೆಚ್ಚುವರಿ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಪ್ರತಿಪಕ್ಷ ಲೇಬರ್ ಪಾರ್ಟಿ 55 ಸ್ಥಾನಗಳನ್ನು ಕಳೆದುಕೊಂಡಿದ್ದು, ಈ ವರೆಗಿನ ಫಲಿತಾಂಶ ಅನ್ವಯ 197 ಸ್ಥಾನಗಳನ್ನು ಗಳಿಸಿಕೊಂಡಿದೆ ಎಂದು ಬಿಬಿಸಿ ವರದಿ ಮಾಡಿದೆ.
ನೂತನ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಬ್ರೆಕ್ಸಿಟ್ ಒಪ್ಪಂದಕ್ಕೆ ಅನುಮೋದನೆ ಪಡೆದು ಜನವರಿ 31ರ ಒಳಗಾಗಿ ಯೂರೋಪಿಯನ್ ಒಕ್ಕೂಟದಿಂದ ಹೊರಬರಲು ಹಾದಿ ಸುಗಮವಾದಂತಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos