ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತು ಸಚಿವರೊಂದಿಗೆ ತುರ್ತು ಸಭೆ ನಡೆಯಿತು.
ಸಭೆ ಬಳಿಕ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಕೋವಿಡ್ ಕೇರ್ ಸೆಂಟರ್‍ನಲ್ಲಿ ಎಷ್ಟು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ? ಬಿಎಂಸಿ ಸೆಂಟರ್‍ನಲ್ಲಿ ಆಗುತ್ತಿರುವ ವ್ಯವಸ್ಥೆಯ ಬಗ್ಗೆಯೂ ಮಾಹಿತಿ ನೀಡಲಾಗಿದೆ. ರೋಗಿಗಳ ರಕ್ಷಣೆ, ವೈದ್ಯಕೀಯ ಸಿಬ್ಬಂದಿಗಳು ಎಷ್ಟು ಮಂದಿ ಇರಬೇಕು ಎಂಬ ವಿಚಾರದ ಬಗ್ಗೆಯೂ ಚರ್ಚೆ ನಡೆಯಿತು ಎಂದು ಹೇಳಿದರು.