ರಾಜ್ಯದಲ್ಲಿ ಮೋದಿ ಪ್ರಚಾರ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಬಿಎಸ್ ವೈ

ರಾಜ್ಯದಲ್ಲಿ ಮೋದಿ ಪ್ರಚಾರ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದೆಲ್ಲೆಡೆ ಅಭ್ಯರ್ಥಿಗಳ ಪರ ನಾಯಕರು ಮತಯಾಚಿಸುತ್ತಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸವಿದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾಳೆ ಮೋದಿ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದಾರೆ. ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ರಾಜ್ಯದಲ್ಲಿ 28 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos