ಬಿಎಸ್ ವೈ ಸಂಭ್ರಮ

ಬಿಎಸ್ ವೈ ಸಂಭ್ರಮ

ಬೆಂಗಳೂರು, ಜು. 24 : ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾಗುತ್ತಿದ್ದಂತೇ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿಎಸ್ ಯಡಿಯೂರಪ್ಪ ಮನೆ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪಟಾಕಿ ಸಿಡಿಸಿ, ನೃತ್ಯ ಮಾಡಿ ಕಾರ್ಯಕರ್ತರು ಸಂಭ್ರಮಾಚರಿಸುತ್ತಿದ್ದರೆ ಇವರಿಗೆ ಬಿಜೆಪಿ ನಾಯಕರಾದ ಆರ್ ಅಶೋಕ್, ತಾರಾ ಮತ್ತಿತತರರು ಸಾಥ್ ನೀಡಿದ್ದಾರೆ.

ಇನ್ನು, ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಸರ್ಕಾರ ರಚನೆ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸುವುದಾಗಿ ಆರ್ ಅಶೋಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿಯಲ್ಲಿ ಈಗ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ ಎಂದೇ ಹೇಳಬಹುದು.

ಫ್ರೆಶ್ ನ್ಯೂಸ್

Latest Posts

Featured Videos