“ದಿ ಕ್ಯಾರವಾನ್” ವರದಿಯಲ್ಲಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮದುವೆ ಉಲ್ಲೇಖ!

“ದಿ ಕ್ಯಾರವಾನ್” ವರದಿಯಲ್ಲಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮದುವೆ ಉಲ್ಲೇಖ!

ಬೆಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಮದುವೆಯಾದ ಮಾಹಿತಿ ಯಡಿಯೂರಪ್ಪ ಅವರೆ ಬರೆದಿದ್ದಾರೆ ಎನ್ನಲಾದ ಡೈರಿಯಲ್ಲಿ ಇದೆ ಎಂದ ದಿ ಕ್ಯಾರವಾನ್ ಸುದ್ದಿ ಮಾಧ್ಯಮ ಸಂಸ್ಥೆ ವರದಿ ಮಾಡಿದೆ.

ಡೈರಿಯ ಪ್ರಕಾರ, ನನ್ನ ಹೆಂಡತಿ ಮೈತ್ರಾದೇವಿ ನಿಧನದ ನಂತರ ಒಂಟಿತನ ತೀವ್ರವಾಗಿ ಬಾಧಿಸುತ್ತಿತ್ತು. ಅದಕ್ಕಾಗಿಯೇ ಶೋಭಾ ಕರಂದ್ಲಾಜೆಯನ್ನು ಕೇರಳದ ಚೊಟ್ಟನಿಕ್ಕರಾದಲ್ಲಿರುವ ಭಗವತಿ ದೇಗುಲದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆಯಾದೆ. ಯಡಿಯೂರು ಸಿದ್ದಲಿಂಗನ ಹೆಸರಿನಲ್ಲಿ ಆಕೆಯನ್ನು ನನ್ನ ಕಾಯಾ, ವಾಚಾ, ಮನಸಾ ಪತ್ನಿ ಎಂದು ಒಪ್ಪಿಕೊಂಡೆ ಎಂದು ಡೈರಿಯಲ್ಲಿ ಉಲ್ಲೇಖಿಸಲಾಗಿದೆ.

ಯಡಿಯೂರಪ್ಪ ಅವರು ಬರೆದಿದ್ದಾರೆ ಎನ್ನಲಾದ ಡೈರಿಯಲ್ಲಿ ಈ ಮಾಹಿತಿಯೂ ಇದೆ ಎಂದು ‘ದಿ ಕ್ಯಾರವಾನ್’ ವರದಿ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಶೋಭಾ ಕರಂದ್ಲಾಜೆ ಅವರನ್ನು ಸಂಪರ್ಕಿಸಿದಾಗ, ‘ಯಾರೋ ಹುಚ್ಚರು ಆ ಡೈರಿ ಬರೆದಿರಬೇಕು ಎಂದು ಶೋಭಾ ಫೋನ್ ಕುಕ್ಕಿದರು. ಮತ್ತೆ – ಮತ್ತೆ ಫೋನ್ ಮಾಡಿದರೂ ಶೋಭಾ ನಮ್ಮ ಕರೆ ಸ್ವೀಕರಿಸಲಿಲ್ಲ’ ಎಂದು ಕ್ಯಾರಾವಾನ್ ವರದಿಗಾರರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos