ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ ಮಂಡನೆ

ಬಿಬಿಎಂಪಿ 2024-25ನೇ ಸಾಲಿನ ಬಜೆಟ್‌ ಮಂಡನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ರವರ ಅಧ್ಯಕ್ಷತೆ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ಉಪಸ್ಥಿತಿಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಶಿವಾನಂದ ಕಲ್ಕೆರಿ ರವರು ಪ್ರಸ್ತುತಿ ಪಡಿಸಲಿದ್ದಾರೆ.

ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿರುವ ಬಿಬಿಎಂಪಿ ಬಜೆಟ್​ಗೆ ಮುಹೂರ್ತ ನಿಗದಿಯಾಗಿದ್ದು, ಬೆಂಗಳೂರು ಮಹಾನಗರ ಉಸ್ತುವಾರಿಯಾಗಿರೋ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಜೆಟ್‍ಗೆ ಒಪ್ಪಿಗೆ ಸೂಚಿಸಿದ್ದಾರೆ. 2024-25 ನೇ ಸಾಲಿನ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯ ಸರ್ಕಾರ 2024-25 ನೇ ಸಾಲಿನಲ್ಲಿ ಬಿಬಿಎಂಪಿಗೆ 3500 ಕೋಟಿ ಅನುದಾನ ನೀಡಿದೆ. ರಾಜ್ಯ ಸರ್ಕಾರದ 3500 ಕೋಟಿ ಅನುದಾನ, ಬಿಬಿಎಂಪಿ 6 ಸಾವಿರ ಕೋಟಿ ಅದಾಯ ಸೇರಿದಂತೆ ಹೊಸ ಜಾಹೀರಾತು ಕಾಯ್ದೆಯಿಂದ ಸುಮಾರು 2 ಸಾವಿರ ಕೋಟಿ ರೂಪಾಯಿ ವಿವಿಧ ಮೂಲಗಳಿಂದ ಕ್ರೂಢೀಕರಿಸಿ 12 ಸಾವಿರ ಕೋಟಿ ಬಜೆಟ್ ಮಂಡನೆ ಅಗುವ ಸಾಧ್ಯತೆ ಇದೆ.

ಸದ್ಯ ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಗೆ ಜೀವ ನೀಡುವ ಹಿನ್ನೆಲೆ ಪಾಲಿಕೆ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಹೆಚ್ಚಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos