ಬೆಂಗಳೂರು, ಮಾ, 23, ನ್ಯೂಸ್ ಎಕ್ಸ್ ಪ್ರೆಸ್: ಧಾರವಾಡದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 72 ಗಂಟೆಗಳಿಂದ ನಿಂತರವಾಗಿ ಕಾರ್ಯಾಚರಣೆ ನಡೆಯುತ್ತಿದೆ. ಮಾರ್ಚ್ 19ರ ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಹೊಸ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿತ್ತು. ಅವಶೇಷಗಳ ಅಡಿಯಿಂದ 40ಕ್ಕೂ ಅಧಿಕ ಜನರನ್ನು ರಕ್ಷಣೆ ಮಾಡಲಾಗಿದೆ. ದುರಂತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ.