ಟೀಮ್ ಗೆ ಮರಳಿದ  ಬುಮ್ರಾ

ಟೀಮ್ ಗೆ ಮರಳಿದ  ಬುಮ್ರಾ

ಹೊಸದಿಲ್ಲಿ, ಡಿ. 13: ಭಾರತ ಹಾಗೂ ವಿಂಡೀಸ್ ನಡುವಣ ಏಕದಿನ ಸರಣಿಯು ಡಿಸೆಂಬರ್ 15 ಆರಂಭವಾಗಲಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಸರಣಿ ವೇಳೆಯಲ್ಲಿ ಗಾಯದ ಸಮಸ್ಯೆಗೊಳಗಾಗಿರುವ ಬುಮ್ರಾ ಮುಂದಿನ ವರ್ಷಾರಂಭದಲ್ಲಿ ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ಟೀಮ್ ಇಂಡಿಯಾಗೆ ಪುನರಾಗಮವನ್ನು ಮಾಡಲಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನ ಯುವ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಗೊಳಗಾಗಿದ್ದರು. ಬಳಿಕ ಹೆಚ್ಚುವರಿ ಬಳಿಕ ಗಾಯ ಗಂಭೀರ ಪ್ರಮಾಣದಲ್ಲ ಎಂಬುದು ತಿಳಿದು ಬಂದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿರಲಿಲ್ಲ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ಹಾಗೂ ವೆಸ್ಟ್‌ಇಂಡೀಸ್ ನೆಲದಲ್ಲಿ ಈಗಗಾಲೇ ಐದು ವಿಕೆಟ್ ಸಾಧನೆ ಮಾಡಿರುವ ಬುಮ್ರಾ, ಕಿವೀಸ್ ವಿರುದ್ಧದ ಸರಣಿ ವೇಳೆಗೆ ತಂಡವನ್ನು ಸೇರಿಕೊಳ್ಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos