ವಿಶ್ವದ ನಂ.1 ಬೌಲರ್ ಬುಮ್ರಾ

ವಿಶ್ವದ ನಂ.1 ಬೌಲರ್ ಬುಮ್ರಾ

ಬೆಂಗಳೂರು: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬುಮ್ರಾ ಪ್ರದರ್ಶನ ಅದ್ಭುತವಾಗಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 2 ವಿಕೆಟ್ ಕಬಳಿಸಿದ್ದ ಬುಮ್ರಾ, ಎರಡನೇ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು.

ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದ ಬುಮ್ರಾ ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದರೆ, ಎರಡನೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಪಡೆದು ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡಿದ್ದರು. ಅಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.

ಈ ಅಮೋಘ ಪ್ರದರ್ಶನ ಲಾಭ ಪಡೆದಿರುವ ಬುಮ್ರಾ, ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಮೂರು ಸ್ಥಾನ ಮೇಲೇರಿ 881 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಬುಮ್ರಾ ಕ್ರಿಕೆಟ್​ನ ಮೂರು ಮಾದರಿಯಲ್ಲೂ ಅಗ್ರಸ್ಥಾನಕ್ಕೇರಿದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ವಾಸ್ತವವಾಗಿ ಬುಮ್ರಾ ಟೆಸ್ಟ್‌ನಲ್ಲಿ ನಂಬರ್ ಒನ್ ಬೌಲರ್ ಆಗಿದ್ದು ಇದೇ ಮೊದಲು. ಇದಕ್ಕೂ ಮುನ್ನ ಅವರು ಏಕದಿನ ಮತ್ತು ಟಿ20ಯಲ್ಲಿ ಈ ಸಾಧನೆ ಮಾಡಿದ್ದರು. ಇದರೊಂದಿಗೆ ಬುಮ್ರಾ, ವಿರಾಟ್ ಕೊಹ್ಲಿ ನಂತರ ಎಲ್ಲಾ ಮೂರು ಮಾದರಿಗಳಲ್ಲಿ ನಂಬರ್-1 ಆದ ಏಷ್ಯಾದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos