ಬೆಂಗಳೂರು, ಮೇ.9, ನ್ಯೂಸ್ ಎಕ್ಸ್ ಪ್ರೆಸ್: ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರಯಾಣ ಶುಲ್ಕವನ್ನು ಶೇ.18ರಷ್ಟು ಏರಿಕೆ ಮಾಡುವ ಸಂಬಂಧ ಸಿಎಂಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾರಿಗೆ ಇಲಾಖೆಯು ಬಸ್ ಪ್ರಯಾಣ ಶುಲ್ಕವನ್ನು ಶೇ. 18ರಷ್ಟು ಏರಿಕೆ ಮಾಡಬೇಕೆಂದು ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ. ಒಂದು ವೇಳೆ ಸಿಎಂ ಇದಕ್ಕೆ ಅನುಮೋದನೆ ನೀಡಿದರೆ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಡಿಸಿ ತಮ್ಮಯ್ಯ, ಪ್ರಯಾಣ ಶುಲ್ಕ ಪರಿಷ್ಕರಣೆ ಪ್ರಸ್ತಾವನೆಯು 2018ರಿಂದಲೂ ಹಾಗೆಯೇ ಉಳಿದಿದೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು ಸಿಎಂ ಜತೆಗೆ ಮಾತನಾಡುತ್ತೇನೆ ಎಂದು ಹೇಳಿರುವ ಸಚಿವರು, ಅನುಮೋದನೆ ದೊರೆತರೆ ಶೀಘ್ರವೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಹೇಳಿದ್ದಾರೆ.