ಲಕ್ನೋ, ಮೇ. 18, ನ್ಯೂಸ್ ಎಕ್ಸ್ ಪ್ರೆಸ್ : ಟ್ರ್ಯಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಂಗರ್ಮೌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ್‌ನ ವಿಷ್ಣು (10), ವಿನೋದ್ ಕುಮಾರ್ (7), ದುಖಿ ಲಾಲ್ ಮೆಹ್ತಾ ಮತ್ತು ಇಬ್ಬರು ಬಾಲಕಿಯರು ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.ದೆಹಲಿ ಮಾರ್ಗವಾಗಿ ಬಿಹಾರಕ್ಕೆ ಪ್ರಯಾಣ ಬೆಳಸಿದ ಖಾಸಗಿ ಬಸ್ ಯೊಂದು ದೇವಖರಿ ಗ್ರಾಮದ ಬಳಿ ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿತ್ತು. ಅದೇ ರಸ್ತೆಯ ತಿರುವಿನಲ್ಲಿ ತರಬೂಜ್ ಹಣ್ಣುಗಳನ್ನು ತುಂಬಿಕೊಂಡು ನಿಂತ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡದ ಪರಿಣಾಮ ಬಸ್ ಪಲ್ಟಿಯಾಗಿದೆ. ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಾಳುಗಳನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತಮ್ಮ ಕಾರ್ಯಾಚರಣೆ ಮುಂದುವರೆಸಿದ್ದಾರೆ