ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಯಡಿಯೂರಪ್ಪ

ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಯಡಿಯೂರಪ್ಪ

ಶಿರಾಳಕೊಪ್ಪ, ಮೇ. 10,ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಸ್ ಪರಸ್ಪರ ಪ್ರತ್ಯಾರೋಪದಲ್ಲಿ ತೊಡಗಿವೆ. ಒಂದೆಡೆ ಕುಮಾರಸ್ವಾಮಿ ತಾವು 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವರ ಕಿತ್ತಾಟ ನಮಗೆ ವರವಾಗಲಿದೆ. ಲೋಕಸಭೆಯಲ್ಲಿ 22 ಸ್ಥಾನ ಗೆದ್ದೇ ಗೆಲ್ಲುತ್ತೇವೆ, ಇದರಲ್ಲಿ ಅನುಮಾನವಿಲ್ಲ. ಹಾಗೆಯೇ ರಾಜ್ಯದಲ್ಲಿ ನಡೆಯುತ್ತಿರುವ 2 ಉಪಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ. ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಸುಳಿವು ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos