ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಧಮ್ಕಿ: ಬಿವೈ ರಾಘವೇಂದ್ರ

ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಧಮ್ಕಿ: ಬಿವೈ ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರವು ಈ ಬಾರಿ ಜಿದ್ದಾಜಿದ್ದಿಯ ಕಣಗಳಲ್ಲಿ ಒಂದಾಗಿದೆ. ಇದಕ್ಕೆ ಕಾರಣ ಬಿಜೆಪಿಯ ಕಟ್ಟಾಳು ಕೆಎಸ್ ಈಶ್ವರಪ್ಪ ಅವರು ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವುದು. ಹೌದು, ತನ್ನ ಪುತ್ರ ಕೆಇ ಕಾಂತೇಶ್​ಗೆ ಹಾವೇರಿ ಟಿಕೆಟ್ ಕೊಡಿಸಿಲ್ಲ ಎಂದು ಯಡಿಯೂರಪ್ಪ ಅವರ ಮೇಲೆ ಕೋಪಗೊಂಡಿರುವ ಈಶ್ವರಪ್ಪ ಅವರು ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಶಿವಮೊಗ್ಗ ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಪೇಜ್ ಪ್ರಮುಖರ ಸಮಾವೇಶವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಸಮಾವೇಶದಲ್ಲಿ ಶಾಸಕ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಜೆಡಿಎಸ್ ಮುಖಂಡರು ಭಾಗಿಯಾಗಿದರು.

ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಧಮ್ಕಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಆರೋಪಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದ ಅವರು, ತಾಯಿ ಹಾಲು ಕುಡಿದು ಬೆಳೆದಿರುವ ಕಾರ್ಯಕರ್ತರು ಯಾರೂ ಹೆದರಬೇಕಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಇಡೀ ಪ್ರಪಂಚದಲ್ಲಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷ ಇಷ್ಟು ದೊಡ್ಡ ಮಟ್ಟದಲ್ಲಿ ಹೊರ ಹೊಮ್ಮಲು ಪೇಜ್ ಪ್ರಮುಖರು ಕಾರಣ. ಪ್ರಪಂಚದಲ್ಲಿ ನರೇಂದ್ರ ಮೋದಿ ನೋಡಲು ಜನರು ಹುಚ್ಚೆಂದು ಕಣಿಯುತ್ತಿದ್ದಾರೆ. ಮೋದಿ ಅವರ ಮಾತು ಕೇಳಬೇಕು ಅಂತಾ ಕಾತುರದಿಂದ ಇರುತ್ತಾರೆ. ಅಂತಹ ಪ್ರಧಾನಮಂತ್ರಿ ಅವರು ಶಿವಮೊಗ್ಗ ಜಿಲ್ಲೆಗೆ ಕಳೆದ ಒಂದೂವರೆ ವರ್ಷದಲ್ಲಿ ಮೂರು ಬಾರಿ ಬಂದಿದ್ದರು ಎಂದು ರಾಘವೇಂದ್ರ ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos