ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಡಲಿ: ಬಿವೈ ವಿಜಯೇಂದ್ರ

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಡಲಿ: ಬಿವೈ ವಿಜಯೇಂದ್ರ

ಬೆಂಗಳೂರು: ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ಕಲಬುರಗಿ: ಇಂದು ಕಲಬುರಗಿಗೆ ಆಗಮಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ತಾನಲ್ಲ, ಅದು ಪಕ್ಷದ ಸಂಸದೀಯ ಮಂಡಳಿ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರೀಯ ಚುನಾವಣಾ ಸಮತಿಯ ನಿರ್ಧಾರ ಎಂದು ಹೇಳಿದರು.

ಮಗ ಕಾಂತೇಶ್ ಗೆ ಹಾವೇರಿ ಟಿಕೆಟ್ ಸಿಗದ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ರೊಚ್ಚಿಗೆದ್ದು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿರುವ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪಗೆ ಮನವಿಯೊಂದನ್ನು ಮಾಡಿದ ವಿಜಯೇಂದ್ರ, ದಶಕಗಳಿಂದ ಅವರು ಪಕ್ಷದ ಕಟ್ಟಾಳು, ಆರಂಭದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಅದನ್ನು ಕಟ್ಟಿ ಬೆಳೆಸಿದ್ದಾರೆ, ಪಕ್ಷದ ವರಿಷ್ಠರ ತೀರ್ಮಾನವನ್ನು ಒಪ್ಪಿಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಡಲಿ ಎಂದರು. ಶಿವಮೊಗ್ಗ ಕ್ಷೇತ್ರದಿಂದ ತಮ್ಮ ಸಹೋದರ ಬಿವೈ ರಾಘವೇಂದ್ರ ಈಗಾಗಲೇ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ ಮತ್ತು ಈ ಬಾರಿಯೂ ಗೆಲ್ಲಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos