ದೇಶದಲ್ಲಿ ಕಾಂಗ್ರೆಸ್ 50 ಸೀಟ್ ಸಹ ದಾಟಲ್ಲ: ಬಿ.ವೈ.ವಿಜಯೇಂದ್ರ

ದೇಶದಲ್ಲಿ ಕಾಂಗ್ರೆಸ್ 50 ಸೀಟ್ ಸಹ ದಾಟಲ್ಲ: ಬಿ.ವೈ.ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಬಿಸಿ ಹೆಚ್ಚಾಗಿದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ಬಾಕಿ ಉಳಿದಿದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳ ಪರ ದೊಡ್ಡ ದೊಡ್ಡ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಮೈಸೂರಿನಲ್ಲಿ ನಿನ್ನೆ ನಡೆದ ಮೋದಿ ರಾಜ್ಯ ಭೇಟಿ ವೇಳೆ ರಸ್ತೆಗಿಳಿದು ನಲಪಾಡ್ ಚೊಂಬು ಪ್ರದರ್ಶನ ವಿಚಾರಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ ಅವರು, ರೈತ ಸಾಲ ಮನ್ನಾ ಹಾಗೂ ಕಾಂಗ್ರೆಸ್ ಹೊಸ ಗ್ಯಾರಂಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಏಕೆಂದರೆ ಯಾವ ಭರವಸೆಯನ್ನೂ ಪೂರೈಸಲ್ಲ. ಅವರು ಅಧಿಕಾರಕ್ಕೆ ಬಂದರೆ ತಾನೇ ಮಾಡುವುದು.

ದೇಶದಲ್ಲಿ ಕಾಂಗ್ರೆಸ್ 50 ಸೀಟ್ ಸಹ ದಾಟಲ್ಲ. ಹೀಗಾಗಿ, ಪ್ರಣಾಳಿಕೆ ಗ್ಯಾರಂಟಿ ಯಾವುದು ಜಾರಿಯಾಗಲ್ಲ ಎಂದು ತಿಳಿಸಿದರು. ಹಿಂದುಳಿದ ನಾಯಕ ಎನ್ನುವ ಸಿದ್ದುಓಲೈಸೋದು ಅಲ್ಪಸಂಖ್ಯಾತರನ್ನು  ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ, ಗ್ಯಾರಂಟಿ ನಿಲ್ಲಿಸಿದರೆ ಜನರೇ ಬಡಿಗೆ ತೆಗೆದುಕೊಂಡು ಸರ್ಕಾರವನ್ನು ಬಡಿಯುತ್ತಾರೆ‌ ಎಚ್ಚರವಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು

 

 

ಫ್ರೆಶ್ ನ್ಯೂಸ್

Latest Posts

Featured Videos