ಸಾಧನೆ ಮಾತನಾಡಬೇಕು ಮಾತು ಸಾಧನೆ ಆಗಬಾರದು: ಡಾ.ಸಿ.ಎನ್ ಮಂಜುನಾಥ್

ಸಾಧನೆ ಮಾತನಾಡಬೇಕು ಮಾತು ಸಾಧನೆ ಆಗಬಾರದು: ಡಾ.ಸಿ.ಎನ್ ಮಂಜುನಾಥ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ ಸಿ.ಎನ್ ಮಂಜುನಾಥ್ ಅವರು ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ ನಿನ್ನೆ ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುನಾಥ್ ಹೆಸರನ್ನು ಘೋಷಿಸಲಾಗಿದೆ.

ಇದರೊಂದಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅಳಿಯ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಭಾವನಾಗಿರುವ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ ಮಂಜುನಾಥ್ ಅವರ ರಾಜಕೀಯ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ತಾವು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಹಿನ್ನೆಲೆ ಈ ಕುರಿತು ಮಾತನಾಡಿರುವ ಡಾ.ಸಿ.ಎನ್ ಮಂಜುನಾಥ್, ನಾನು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದೇನೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ಸಿ.ಎನ್ ಮಂಜುನಾಥ್, ನಾವು ಯಾರನ್ನೂ ಟೀಕೆ ಮಾಡುವುದಿಲ್ಲ. ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಮೇಲೆ ಚುನಾವಣೆಯಾಗಲಿ. ಸಾಧನೆ ಮಾತನಾಡಬೇಕು ಮಾತು ಸಾಧನೆ ಆಗಬಾರದು ಎಂದರು.

ಈ ಚುನಾವಣೆಯಲ್ಲಿ ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಡಾ.ಸಿಎನ್ ಮಂಜುನಾಥ್ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos