ಮಾನಸಿಕ ಖಿನ್ನರ ರಕ್ಷಣೆಗೆ ನ್ಯಾಯಾಧೀಶರ ಕರೆ

ಮಾನಸಿಕ ಖಿನ್ನರ ರಕ್ಷಣೆಗೆ ನ್ಯಾಯಾಧೀಶರ ಕರೆ

ಕೋಲಾರ: ಮಾನಸಿಕ ಖಿನ್ನತೆ ಮತ್ತು ಒತ್ತಡಕ್ಕೆ ಒಳಗಾಗಿರುವರನ್ನು ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಎಂ.ಎಲ್ ರಘುನಾಥ್ ತಿಳಿಸಿದರು
ಕೋಲಾರದಲ್ಲಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಾನಸಿಕ ಅಸ್ವಸ್ಥರು ಕಂಡುಬಂದರೆ ಅಂತಹವರನ್ನು ಗುರುತಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಆರೋಗ್ಯ ಇಲಾಖೆಯ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿ, ಕೋವಿಡ್ ೧೯ ಹಿನ್ನೆಲೆಯಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಗಮನಹರಿಸಿ ಇಂತಹ ಖಾಯಿಲೆಗಳನ್ನು ತಡೆಯಬೇಕಾಗಿದೆ ಎಂದರು.
ವಕೀಲರ ಸಂಘದ ಕಾರ್ಯದರ್ಶಿ ರಘುಪತಿ ಗೌಡ ಮಾತನಾಡಿ, ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಗಳು ಯಾವ ಕಾರಣಕ್ಕಾಗಿ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಗುರುತಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಿ ಅವರನ್ನು ಸಮಾಜಕ್ಕೆ ಉತ್ತಮ ಪ್ರಜೆಯಾಗಿ ಮಾಡಬೇಕು. ಹಳ್ಳಿ ಹಳ್ಳಿಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಳ್ಳಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos