ಖಾಸಗಿಯವರಿಗೆ ಆಗುವ ನಷ್ಟ ಭರಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಖಾಸಗಿಯವರಿಗೆ ಆಗುವ ನಷ್ಟ ಭರಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ, ಸೆ.11: ಬೆಂಗಳೂರು ಬಂದ್ ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಇಒದರಿಂದ ಖಾಸಗಿ ಸಾರಿಗೆಗಳು ನಷ್ಟ ಅನುಭವಿಸುತ್ತಿದ್ದು, ‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಬೆಂಗಳೂರು ಬಂದ್‌ ಗೆ ಕರೆ ಕೊಟ್ಟದ್ದವು. ಆಟೋ, ಕ್ಯಾಬ್, ಸೇರಿದಂತೆ ಸಾವಿರಾರು ಖಾಸಗಿ ವಾಹನಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಕೆಲವೆಡೆ ಪ್ರಯಾಣಿಕರು ಪರದಾಡುವಂತಾಯಿತು.

ಖಾಸಗಿ ಸಾರಿಗೆ ಒಕ್ಕೂಟಗಳ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಮೈಸೂರಿನಲ್ಲಿ ಖಾಸಗಿ ಒಕ್ಕೂಟಗಳಿಗೆ ತಿರುಗೇಟು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos