ಗಂಡು ಚಿರತೆ ಸೆರೆ

ಗಂಡು ಚಿರತೆ ಸೆರೆ

ರಾಮನಗರ: ತಾಲ್ಲೂಕಿನ ಜಾಲಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಮೂರು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ.
ಜಾಲಮಂಗಲ ಸುತ್ತಲಿನ ಗುಡ್ಡಗಳಲ್ಲಿ ಚಿರತೆಗಳು ವಾಸವಿವೆ. ಈಚೆಗೆ ಅವು ಗ್ರಾಮಕ್ಕೆ ನುಗ್ಗಿ ಸಾಕುಪ್ರಾಣಿಗಳನ್ನು ಹೊತ್ತೊಯ್ಯುವುದು ಹೆಚ್ಚಾಗಿತ್ತು. ಗ್ರಾಮದ ಆಸುಪಾಸಿನಲ್ಲಿ ಕಾಣಿಸಿಕೊಂಡಿದ್ದರಿAದ ಜನರಲ್ಲಿ ಆತಂಕ ಹೆಚ್ಚಿತ್ತು. ಹೀಗಾಗಿ ಅವುಗಳನ್ನು ಸೆರೆ ಹಿಡಿಯುವಂತೆ ಜನರು ಮನವಿ ಮಾಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಸೆರೆಯಾದ ಚಿರತೆಯನ್ನು ಸ್ಥಳಾಂತರಿಸಿದ್ದು, ಮಂಗಳವಾರ ಸಂಜೆ ಕಾಡಿಗೆ ಬಿಡಲಾಯಿತು.
ಕಾರ್ಯಾಚರಣೆಯಲ್ಲಿ ಎಸಿಎಫ್ ರಾಮಕೃಷ್ಣಪ್ಪ, ರಾಮನಗರ ವಲಯ ಅರಣ್ಯಾಧಿಕಾರಿ ಕಿರಣ್ಮಾರ್, ಉಪವಲಯ ಅರಣ್ಯ ಅಧಿಕಾರಿ ವಾಸು, ಅರಣ್ಯ ರಕ್ಷಕರಾದ ರವಿ, ಶಾಂತಕುಮಾರ್, ಮಂಜುನಾಥ್ ಪಾಲ್ಗೊಂಡರು.

ಫ್ರೆಶ್ ನ್ಯೂಸ್

Latest Posts

Featured Videos