ಮಂಡ್ಯ,ಜು.27: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ಬಸ್ಗೆ ಡಿಕ್ಕಿಯಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಘಟನೆ ನಡೆದಿದೆ. ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರು ಬಸ್ಗೆ ಡಿಕ್ಕಿಯಾಗಿದೆ. ಬಸ್ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಡಿವೈಡರ್ ಹಾರಿ ಬಸ್ಗೆ ಕಾರು ಡಿಕ್ಕಿಯಾಗಿದೆ.