ಮಂಡ್ಯ, ಆ. 19 : ರಸ್ತೆಯ ಬದಿಯಲ್ಲಿ ಮಹಿಳೆಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಭಾಗ್ಯಮ್ಮ (40) ಕೆ.ಆರ್.ಪೇಟೆ ತಾಲೂಕಿನ ಹರಪನಹಳ್ಳಿ ಗ್ರಾಮದ ಮುಖ್ಯ ರಸ್ತೆ ಬದಿಯಲ್ಲಿ ನೆಡೆದು ಡೇರಿಗೆ ಹಾಲು ಹಾಕಲು ಹೋಗುತ್ತಿದ್ದ ಭಾಗ್ಯಮ್ಮ ಅವರಿಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಕೂಡಲೇ 108 ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು, ತೀವ್ರ ರಕ್ತಸ್ರಾವದಿಂದ ಮಾರ್ಗ ಮಧ್ಯ ಕೊನೆಯುಸಿರೆಳೆದರು.