ರೈತರ ಮೇಲಿನ ಕೇಸ್ ವಾಪಸ್: ಸಿಎಂ ಕುಮಾರಸ್ವಾಮಿ

ರೈತರ ಮೇಲಿನ ಕೇಸ್ ವಾಪಸ್: ಸಿಎಂ ಕುಮಾರಸ್ವಾಮಿ

ಮಂಡ್ಯ: ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ತಿಂಗಳ 27 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದು ಅಂದೇ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.

ಜಿಲ್ಲೆಯಲ್ಲಿನ ಕಾವೇರಿ ಹೋರಾಟದ ಸಮಯದಲ್ಲಿ ರೈತರ ಮೇಲೆ ಹಾಕಲಾಗಿದ್ದ ಶೇ.೯೫
ರಷ್ಟು ಪ್ರಕರಣ ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಸಂಪುಟ ಉಪ ಸಮಿತಿಯಲ್ಲಿಯೂ ನಿರ್ಧರ  ಕೈಗೊಳ್ಳಲಾಗಿದೆ..

ಮಂಡ್ಯ ಜಿಲ್ಲೆಗೆ ಇತ್ತೀಚೆಗೆ ೫ ಸಾವಿರ ಕೋಟಿ ರೂಪಾಯಿ ವಿಶೇಷ ಅನುದಾನ
ಪ್ರಕಟಿಸಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಇದೀಗ ರೈತರ ಮೇಲಿನ ಪ್ರಕರಣ ಹಿಂಪಡೆಯುವ
ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ.

ಮದ್ದೂರಿನ ಕೆಎಂ ದೊಡ್ಡಿಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ರೈತರ ಮೇಲೆ ದಾಖಲಾಗಿದ್ದ ಶೇ.65ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ. ಪ್ರಕರಣಗಳ ಬಗ್ಗೆ ತಾಲೂಕುವಾರು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸರ್ಕಾರದ ಆಸ್ತಿ-ಪಾಸ್ತಿ ನಷ್ಟ ಮಾಡಿರುವ ಕೇಸುಗಳು
ವಾಪಸ್ ಪಡೆಯಲಿದ್ದೇವೆ. ಆದರೆ ಖಾಸಗಿ ಆಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಕ್ಯಾಮೆರಾ, ಕಾರುಗಳ
ಜಖಂ, ಅಂಗಡಿ, ಮುಗ್ಗಟ್ಟು ಮೇಲೆ ಕಲ್ಲು ತೂರಾಟ, ಪಾಂಡವಪುರ ಜಡ್ಜ್ ಮನೆ ಮೇಲೆ ದಾಳಿ ಸೇರಿದಂತೆ ಖಾಸಗಿಯಾಗಿ
ನೀಡಿರುವ ಕೇಸುಗಳು ಕೋರ್ಟ್‌ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos