ಹೊಸಕೋಟೆ, ಸೆ. 5: ಹೊಸಕೋಟೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆಯನ್ನ ಆಚರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಹಿರಿಯ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಬಿಎನ್ ಬಚ್ಚೇಗೌಡ ,ತಾಲ್ಲೂಕು ದಂಡಾಧಿಕಾರಿ ರಮೇಶ್ ಕುಮಾರ್, ಬಿಇಒ ಕನ್ನಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ ಪ್ರಸಾದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯದೇವಯ್ಯ ಉಪಸ್ಥಿತರಿದ್ದರು.