BBMPಯಲ್ಲಿ ಕನ್ನಡ ರಾಜ್ಯೋತ್ಸವದ ಮೆರಗು

BBMPಯಲ್ಲಿ ಕನ್ನಡ ರಾಜ್ಯೋತ್ಸವದ ಮೆರಗು

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವವನ್ನು ಇಂದು ರಾಜ್ಯದಾದ್ಯಂತ ಎಲ್ಲೆಡೆ ಆಚರಿಸಲಾಗುತ್ತಿದ್ದು ಅದರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಧ್ವಜಾರೋಹಣ ನೆರವೇರಿಸಿದರು.

ಈ ಈ ಸಂರ್ಭದಲ್ಲಿ ಮಾಜಿ ಮಹಾಪೌರರಾದ ಹುಚ್ಚಪ್ಪ, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಲಕ್ಷ್ಮಿದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos