ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳಾ ನಡೆಯಲಿದೆ. ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಂಪರ್ಕವನ್ನು ಕಲ್ಪಿಸಲು ಮತ್ತು ರೈತರು ಖರೀದಿದಾರರು, ಮಾರಾಟಗಾರರು, ರಫ್ತುದಾರರಿಗೆ, ವಿಫಲ ಅವಕಾಶಗಳನ್ನು ಒದಗಿಸಲು ಈ ಮೇಳ ಆಯೋಜನೆ ಮಾಡಲಾಗಿದೆ. ರಾಜ್ಯ ಹಾಗೂ ಹೊರರಾಜ್ಯ ಪ್ರತಿನಿಧಿಗಳು ಮೇಳದಲ್ಲಿ ಭಾಗವಹಿಸಲಿದ್ದಾರೆ. ಸಿರಿಧಾನ ಮತ್ತು ಸಾವಯವ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಂಪರ್ಕವನ್ನು ಕಲ್ಪಿಸಲು ಮತ್ತು ರೈತರು ಖರೀದಿದಾರರು, ಮಾರಾಟಗಾರರ ಮತ್ತು ರಫ್ತುದಾರರಿಗೆ ವಿಪುಲ ಅವಕಾಶಗಳನ್ನು ಒದಗಿಸಲು ಕೃಷಿ ಇಲಾಖೆ ಆಯೋಜನೆ ಮಾಡಿರುವ ಮೇಳ ಜನವರಿ 7ರವರೆಗೆ ನಡೆಯಲಿದೆ.
ನಗರದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಮೂರು ದಿನಗಳ ಕಾಲ ನಡೆಯುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಮೇಳದಲ್ಲಿನ ಮಳಿಗೆಗಳನ್ನು ವೀಕ್ಷಿಸಿದರು.