ಸಿಇಟಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಸಿಇಟಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಬೆಂಗಳೂರುಮಾ.11, ನ್ಯೂಸ್ ಎಕ್ಸ್ ಪ್ರೆಸ್: ಏಪ್ರೀಲ್‍ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ  ಏ.23 ಮತ್ತು ಏ.24ರಂದು ನಿಗದಿಯಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ಮುಂದೂಡುವ ಸಾಧ್ಯತೆಗಳಿವೆ.

ಲೋಕಸಭೆ ಚುನಾವಣೆ ರಾಜ್ಯದಲ್ಲಿ 2  ಹಂತಗಳಲ್ಲಿ ನಡೆಯಲಿದ್ದು, 2ನೇ ಹಂತದ ಚುನಾವಣೆ ಏ.23ರಂದು ನಡೆಯಲಿದೆ.

ಸಿಇಟಿ ಪರೀಕ್ಷೆಯೂ ಅದೇ ದಿನಾಂಕ ಇರುವ ಕಾರಣ ಪರೀಕ್ಷೆಗೆ ಬರೆಯಲಿರುವ  ಅಭ್ಯರ್ಥಿಗಳಿಗೆ ಮತದಾನ ಮಾಡಲು ಅಡ್ಡಿಯಾಗುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ  ಪರೀಕ್ಷೆ ಮುಂದೂಡೂವ ಸಾಧ್ಯತೆ ಹೆಚ್ಚು ಕಂಡು ಬರುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos