ಐಪಿಎಲ್ ನಲ್ಲಿ ಇತಿಹಾಸ ನಿರ್ಮಿಸಿದ ಚಹಲ್

ಐಪಿಎಲ್ ನಲ್ಲಿ ಇತಿಹಾಸ ನಿರ್ಮಿಸಿದ ಚಹಲ್

ಬೆಂಗಳೂರು: ನಿನ್ನೆ ಜೈಪುರದ ಸವಾಯಿ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 38ನೇ ಪಂದ್ಯದಲ್ಲಿ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ 38ನೇ ಪಂದ್ಯದ ಮೂಲಕ ಯುಜ್ವೇಂದ್ರ ಚಹಲ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೈಪುರದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲ್ ಮಾಡಿದ್ದ ಚಹಲ್ 48 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು.

ಈ ಒಂದು ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ 200 ವಿಕೆಟ್​ಗಳನ್ನು ಪಡೆದ ಮೊದಲ ಬೌಲರ್​ ಎನಿಸಿಕೊಂಡರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿಕೆಟ್​ ಗಳಿಕೆಯಲ್ಲಿ ದ್ವಿಶತಕದ ಸಾಧನೆ ಮಾಡಿದರು.

ಐಪಿಎಲ್​ನಲ್ಲಿ 152 ಇನಿಂಗ್ಸ್​ಗಳಲ್ಲಿ​ ಬೌಲಿಂಗ್ ಮಾಡಿರುವ ಚಹಲ್ ಈವರೆಗೆ ಒಟ್ಟು 3353 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 200 ವಿಕೆಟ್​ಗಳನ್ನು ಕಬಳಿಸುವ ಮೂಲಕ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos