ಹಿಂದೂ ಪರ ಸಂಘಟಣೆಯ ನಾಯಕಿ ಚೈತ್ರಾ ಕುಂದಾಪುರ ಪೊಲೀಸ್ ವಷಕ್ಕೆ

ಹಿಂದೂ ಪರ ಸಂಘಟಣೆಯ ನಾಯಕಿ ಚೈತ್ರಾ ಕುಂದಾಪುರ ಪೊಲೀಸ್ ವಷಕ್ಕೆ

ಬೆಂಗಳೂರು: ಹಿಂದೂ ಪರ ಸಂಘಟಣೆಯ ನಾಯಕಿ, ಮತ್ತು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ವಾಗ್ಮಿ ಚೈತ್ರಾ ಕುಂದಾಪುರ ಅವರು ಬಿಜೆಪಿ ಪಕ್ಷದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಸಮಾಜ ಸೇವಕರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಿಂದ ಎಮ್ಎಲ್ಎ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7ಕೋಟಿ ರೂಪಾಯಿ ಪಡೆದುಕೊಂಡು ವಂಚಿಸಿದ್ದಾರೆ. ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ತನಿಖೆನಡೆಸಿ ನಿನ್ನೆ ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣದಲ್ಲಿ ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ…
ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಚೈತ್ರಾ ಹಾಗೂ ಅವರ ಸಂಗಡಿಗರು ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ ಮುಖಂಡರ ಹೆಸರಲ್ಲಿ ಈ ಮೋಸ ಮಾಡಿದ್ದಾರೆ. ಚೈತ್ರ ಹಾಗೂ ನಾಲ್ಕೈದು ಜನರ ತಂಡ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರ ತಂಡವನ್ನೂ ಸೃಷ್ಟಿಮಾಡಿದ್ದರು ಎನ್ನಲಾಗಿದೆ. ಈಗ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರು ಪೊಲೀಸರ ಅತಿಥಿಯಾಗಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಗನ್ ಕಡೂರು ಹಾಗೂ ಪ್ರಸಾದ್ ರನ್ನು ವಶಕ್ಕೆ ಪಡೆಯಲಾಗಿತ್ತು.

ವರದಿ
ಮಂಜುನಾಥ.ಲಕ್ಕಿಮರ(ವಿಜಯನಗರ)

ಫ್ರೆಶ್ ನ್ಯೂಸ್

Latest Posts

Featured Videos