ಚಕ್ಕರ್ ಸಚಿವರಿಗೆ ಚಾಟಿ

ಚಕ್ಕರ್  ಸಚಿವರಿಗೆ ಚಾಟಿ

ನವದೆಹಲಿ, ಜು.17 : ಸಂಸತ್ತಿನ ಕಲಾಪಗಳಿಂದ ದೂರ ಉಳಿಯುವ ಸಂಸದರಿಗೆ ಬಿಸಿ ಮುಟ್ಟಿಸಿ ಬಂದಿದ್ದ ಪ್ರಧಾನಿ ಮೋದಿ ಸದನಕ್ಕೆ ಚಕ್ಕರ್ ಹೊಡೆಯುವ ಕೇಂದ್ರ ಸಚಿವರತ್ತ ಚಾಟಿ ಬೀಸಿದ್ದಾರೆ. ಸಂಸತ್ತಿನ ಕಲಾಪ ವೇಳೆ ರೋಸ್ಟರ್ ಪಟ್ಟಿಯಲ್ಲಿ ಹೆಸರಿದ್ದರೂ ಗೈರು ಹಾಜರಾಗುವ ಮಂತ್ರಿಗಳ ವಿರುದ್ಧ ಕೆಂಡಕಾರಿರುವ ಅವರು, ಅಂತಹ ಸಚಿವರ ಪಟ್ಟಿ ಸಂಜೆಯೊಳಗೆ ತಯಾರಿಸುವಂತೆ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಂಗಳವಾರ ಮಾತನಾಡಿದ ಪ್ರಧಾನಿ, ಕಲಾಪಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎನ್ನುವ ಸಂಸದರು ಆ ಬಗ್ಗೆ ಮೊದಲೇ ಮಾಹಿತಿ ನೀಡಿ ಹೋಗಬೇಕು ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos