ಚಮಕ್ ಸಿನಿಮಾದಲ್ಲಿ ರಶ್ಮಿಕಾ ಎಂಟ್ರಿ

ಚಮಕ್ ಸಿನಿಮಾದಲ್ಲಿ ರಶ್ಮಿಕಾ ಎಂಟ್ರಿ

ಬೆಂಗಳೂರು, ಅ. 11 : ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿ. ಬ್ಯೂಟಿ ಮತ್ತೊಂದು ಕನ್ನಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಸುದ್ದಿ ಹರಿದಾಡುತ್ತಿದೆ. ರಶ್ಮಿಕಾ ಮಂದಣ್ಣ ಹಾಗೂ ರಶ್ಮಿಕಾರ ಫ್ಯಾನ್ ಪೇಜ್ ಇನ್ಸ್ಟಾಗ್ರಾಂ ಖಾತೆ) ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲೇ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮತ್ತೆ ಸ್ಯಾಂಡಲ್ವುಡ್ಗೆ ಮರಳುತ್ತಿದ್ದಾರಂತೆ. ಸದ್ಯ ‘ಪೊಗರು’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ರಶ್ಮಿಕಾಗೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದೆಯಂತೆ ರಶ್ಮಿಕಾ ಮಂದಣ್ಣ ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದು, ಸಾಲು ಸಾಲು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗಳಿಂದ ಬಿಡುವು ಸಿಕ್ಕಲ್ಲಿ ಕಿರಿಕ್ ಹುಡುಗಿ ಮತ್ತೊಂದು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೂ ಸಹ ಗೋಲ್ಡನ್ ಸ್ಟಾರ್ ಗಣೇಶ್ ಜತೆ. ಹೌದು, ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾವೊಂದು ಸೆಟ್ಟೇರಲಿದೆ ಎಲ್ಲ ಸರಿ ಹೋದರೆ ರಶ್ಮಿಕಾ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಮತ್ತೊಮ್ಮೆ ಬೆಳ್ಳಿ ಪರದೆ ಮೇಲೆ ಒಂದಾಗಲಿದ್ದಾರೆ ಈ ಹಿಂದೆ ಗಣೇಶ್ ಹಾಗೂ ರಶ್ಮಿಕಾ ಮಂದಣ್ಣ ‘ಚಮಕ್’ ಚಿತ್ರದಲ್ಲಿ ಅಭಿನಯಿಸಿದ್ದರು

ಫ್ರೆಶ್ ನ್ಯೂಸ್

Latest Posts

Featured Videos