ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಸತತ ಸೋಲು.!

ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಸತತ ಸೋಲು.!

ಬೆಂಗಳೂರು: ಈ ಬಾರಿಯ ವಿಶ್ವಕಪ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಬಾಂಗ್ಲಾದೇಶ್ ವಿರುದ್ಧ ಮಾತ್ರ ಗೆದ್ದಿರುವ ಇಂಗ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ ಹಾಗೂ ಶ್ರೀಲಂಕಾ ವಿರುದ್ಧ ಪರಾಜಯಗೊಂಡಿದೆ.

ಏಕದಿನ ವಿಶ್ವಕಪ್​ನ 25ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ . ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 33.2 ಓವರ್​ಗಳಲ್ಲಿ 156 ರನ್​ಗಳಿಗೆ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 25.4 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 160 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು ಇದುವರೆಗೆ 79 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಇಂಗ್ಲೆಂಡ್ ತಂಡವು 38 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡ 37 ಬಾರಿ ಗೆಲುವು ದಾಖಲಿಸಿದೆ. ಇನ್ನು ಮೂರು ಪಂದ್ಯಗಳು ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯ ಕಂಡಿತ್ತು.

 

ಫ್ರೆಶ್ ನ್ಯೂಸ್

Latest Posts

Featured Videos