ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಮೈಸೂರು,ಜು. 26: ಆಷಾಢ ಮಾಸದ ಇಂದು ಕೊನೆಯ ಶುಕ್ರವಾರ ಹಿನ್ನೆಲೆ ಬೆಳ್ಳಂಬೆಳಗ್ಗೆ ತಂಪಾದ ವಾತಾವರಣ ಭಕ್ತರು ಬೆಟ್ಟದ ಮೆಟ್ಟಿಲು ಹತ್ತಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಹಿನ್ನೆಲೆಯಲ್ಲಿ ಭಕ್ತರ ದರ್ಶನಕ್ಕೆ ಬೇಕಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಸುಮಾರು 2 ಲಕ್ಷ ಭಕ್ತರು ಭೇಟಿ ನೀಡುವ ನಿರೀಕ್ಷೆ ಇದೆ.
ಆಷಾಢ ಮಾಸದ ಇಂದು ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಭಕ್ತರು ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗಿನಿಂದಲೇ ದೇವಿಯ ದರ್ಶನಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಭಕ್ತರಿಗೆ ಸುಲಭವಾಗಿ ದರ್ಶನ ಮಾಡಲು ಅನುವು ಮಾಡಿಕೊಡಲಾಗಿತ್ತು. ಇಂದು ದೇವಿಗೆ ವಿಶೇಷ ಅಲಂಕಾರ ಕೂಡ ಮಾಡಲಾಗಿತ್ತು.
ಬೆಳಗ್ಗೆ 3.30ರ ವೇಳೆಗೆ ದೇವಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ದುರ್ಗೆಗೆ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆ 5.15 ರಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 9.30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ಸಂಜೆಯವರೆಗೂ ದರ್ಶನ ವ್ಯವಸ್ಥೆ ಮುಂದುವರಿಯಲಿದ್ದು, ಸಂಜೆ 6.30ಕ್ಕೆ ಅಭಿಷೇಕ ಹಾಗೂ 10.30ರ ವರೆಗೂ ದೇವಿಯ ದರ್ಶನಕ್ಕೆ ಆಗಮಿಸಬಹುದು ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos