‘ಇದಾಯಿ’ ಚಂಡಮಾರುತ ಸಾವಿರಕ್ಕೂ ಹೆಚ್ಚು ಸಾವು

‘ಇದಾಯಿ’ ಚಂಡಮಾರುತ ಸಾವಿರಕ್ಕೂ ಹೆಚ್ಚು ಸಾವು

ಬೀರಾ, ಮಾ.19, ನ್ಯೂಸ್ ಎಕ್ಸ್ ಪ್ರೆಸ್: ಆಫ್ರಿಕಾ ಖಂಡದ ಮೊಜಾಂಬಿಕ್ನಲ್ಲಿ ಇದಾಯಿ ಚಂಡಮಾರುತದಿಂದ ಮೊಜಾಂಬಿಕ್ ಗಡಿಯಲ್ಲಿರುವ ಮ್ಯಾನಿಕಲ್ಯಾಂಡ್ ಪ್ರಾಂತ್ಯದ ಸಾವಿರಾರು ಜನರ ಬದುಕು ಅಸ್ತವ್ಯಸ್ತಗೊಂಡಿದೆ.

ವಿದ್ಯುತ್ ಸಂಪರ್ಕ ಕಡಿಗೊಂಡಿದ್ದು, ಸೇತುವೆಗಳು ಮುಳುಗಡೆಯಾಗಿವೆ.

ಚಿಮಾನಿಮನಿ ಜಿಲ್ಲೆಯಲ್ಲಿ ಕನಿಷ್ಠ 25 ಮನೆಗಳು ಹಾನಿಗೊಳಗಾಗಿವೆ. ಹಲವರು ಜನರು ನಾಪತ್ತೆಯಾಗಿದ್ದಾರೆ ಎಂದು ಚಿಮಾನಿಮಾನಿ ಜಿಲ್ಲೆಯ ಸಂಸತ್ ಸದಸ್ಯ ಜೋಶುವಾ ಸಾಕ್ಕೊ ತಿಳಿಸಿದ್ದಾರೆ.

ಚಂಡಮಾರುತದಿಂದ ಕುಡಿಯುವ ನೀರಿನ ವ್ಯವಸ್ಥೆ ಹಾಳಾಗಿದೆ. ಅನೇಕ ಕಡೆ ಸಂಪರ್ಕ ಕಡಿದು ಹೋಗಿದೆ ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಇತರ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳ ಸಾಮಾನ್ಯ ಕಾರ್ಯಗಳ ಮೇಲೂ ಬಹಳ ಕೆಟ್ಟ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಇನ್ನು ಪಂಗ್ಯು ಮತ್ತು ಬುಜಿ ನದಿಗಳ ಪ್ರವಾಹದಿಂದ ಅನೇಕ ಗ್ರಾಮಗಳು ಕಣ್ಮರೆಯಾಗಿವೆ. ನದಿಗಳ ನೀರಿನಲ್ಲಿ ದೇಹಗಳು ತೇಲುತ್ತಿರುವುದು ಸಾಮಾನ್ಯವಾಗಿದ್ದು, ಪ್ರವಾಹ ಮತ್ತು ಚಂಡಮಾರುತದಂತಹ ವಿಕೋಪಗಳಿಂದ ಜನರ ಜೀವ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos