ಮೈಸೂರು, ಅ. 6 : ಗಾಯಕ ಚಂದನ ಶಟ್ಟಿ ಮತ್ತು ಡಬ್ ಮ್ಯಾಷ್ ಹುಡಗಿ ನಿವೇದಿತಾ ಗೌಡ ಮೈಸೂರು ಯುವ ದಸರಾ ವೇದಿಕೆಯಲ್ಲಿ ಇಬ್ಬರು ಪರಸ್ಪರ ಪ್ರೇಮ ನಿವೇದಿಸಿಕೊಂಡ, ಮುತ್ತಿನ ವಿನಿಮಯ ಮಾಡಿ ಎಂಗೇಜ್ಮೆಂಟ್ ಮಾಡಿಕೊಂಡಿರುವ ಘಟನೆ ಸಾರ್ವಜನಿಕರ ಕಡು ಕೋಪ ಹಾಗೂ ಟೀಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮೇಲೆ ದೂರು ದಾಖಲು ಮಾಡಿದ್ದಾರೆ. ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಕುರಿತು ಚಂದನ್ ಮೇಲೆ ಕೇಸಾದರೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲು ಮಾಡಲಾಗಿದೆ.