ಇಂದು ಚಂದನದ ಗೊಂಬೆ ಮದುವೆ

ಇಂದು ಚಂದನದ ಗೊಂಬೆ ಮದುವೆ

ಮೈಸೂರು, ಫೆ. 26: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳಗ್ಗೆ 8.15 ರಿಂದ 9 ಗಂಟೆಗೆ ಧಾರಾ ಮುಹೂರ್ತವಿತ್ತು. ಮೈಸೂರಿನ ಹಿನಕಲ್ ಸ್ಪೆಕ್ಟ್ರಾ ಕಲ್ಯಾಣ ಮಂಟಪದಲ್ಲಿ ಚಂದನ್ ನಿವೇದಿತಾರ ವಿವಾಹ ಅದ್ಧೂರಿಯಾಗಿ ನೆರವೇರಿತು. ಕಲ್ಯಾಣ ಮಂಟಪದ ಹೊರ ಆವರಣದಲ್ಲಿ ವಿಶೇಷವಾಗಿ ಸಿದ್ಧಪಡಿಸಲಾಗಿದ್ದ ಹೂವಿನ ಮಂಟಪದಲ್ಲಿ ಚಂದನ್ ನಿವೇದಿತಾರಿಗೆ ಮಾಂಗಲ್ಯ ಧಾರಣೆ ಮಾಡಿದರು. ನೂತನ ದಂಪತಿಗೆ ಬಂಧುಗಳು ಹಾಗೂ ಸ್ನೇಹಿತರು ಧಾರೆ ಎರೆದು ಹಾರೈಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos