ಐಟಿ ರೇಡ್ ಬಗ್ಗೆ ಮೋದಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ!

ಐಟಿ ರೇಡ್ ಬಗ್ಗೆ ಮೋದಿಗೆ ಚಂದ್ರಬಾಬು ನಾಯ್ಡು ಎಚ್ಚರಿಕೆ!

ಅಮರಾವತಿ, ಏ. 5, ನ್ಯೂಸ್ ಎಕ್ಸ್ ಪ್ರೆಸ್: ‘ನೀವು ಇದೇ ರೀತಿ ಸುಖಾಸುಮ್ಮನೆ ಐಟಿ ರೇಡ್ ಮಾಡಿಸುತ್ತಿದ್ದರೆ ಮುಂದೊಮ್ಮೆ ಭಾರೀ ಬೆಲೆ ತೆರಬೇಕಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೊದಿ ಅವರಿಗೆ ಟಿಡಿಪಿ ನಾಯಕ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಖಡಕ್ ಎಚ್ಚರಿಕೆ ನೀಡಿದ್ದಾರೆ. ತೆಲುಗು ದೇಶಂ ಪಕ್ಷದ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಈ ಕ್ರಮವನ್ನು ನಾಯ್ಡು ಅವರು ಖಂಡಿಸಿ, ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡುತ್ತೇನೆ. ಅವರು ಇದೇ ರೀತಿ ಕೆಲಸವನ್ನು ಮುಂದುವರಿಸಿದರೆ ಭಾರೀ ಬೆಲೆ ತೆರಬೇಕಾಗುತ್ತದೆ. ನಾವು ಭಾರತವನ್ನು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದ್ದೇವೆ. ನೀವು ಹುದ್ದೆಯಿಂದ ಕೆಳಗಿಳಿಯುತ್ತಿರುವ ಪ್ರಧಾನಿ. ನಾನು ಅಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ. ನೀವು ಮೋದಿಯವರ ಮಾತನ್ನು ಕೇಳಬೇಡಿ, ಅಕಸ್ಮಾತ್ ಕೇಳಿದರೆ ನೀವೂ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ನಾಯ್ಡು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos