ಚಂದ್ರಶೇಖರಿಗೆ 2018ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಚಂದ್ರಶೇಖರಿಗೆ 2018ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ, ಏ. 22 ನ್ಯೂಸ್ ಎಕ್ಸ್ ಪ್ರೆಸ್: ಮುರುಘಾ ಮಠದ ವತಿಯಿಂದ ನೀಡಲಾಗುವ 2018ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ, ದಲಿತ-ಬಂಡಾಯ ಧ್ವನಿತ ಪ್ರಗತಿಪರ ಚಿಂತಕ, ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ(ಚಂಪಾ) ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ.ಶಿವಮೂರ್ತಿ ಮುರುಘಾ ಶರಣರು, ಸಾಹಿತ್ಯ ಕ್ಷೇತ್ರಕ್ಕೆ ಚಂಪಾ ನೀಡಿರುವ ಕೊಡುಗೆ ಹಾಗೂ ಕನ್ನಡ ಭಾಷೆಯನ್ನು ಕಟ್ಟುವಲ್ಲಿ ಅವರ ಕಾರ್ಯವನ್ನು ಪರಿಗಣಿಸಿ ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಮೇ 7ರಂದು ಪೂರ್ವಾಹ್ನ 11ಗಂಟೆಗೆ ಚಿತ್ರದುರ್ಗ ಶ್ರೀ ಮಠದ ಆವರಣದಲ್ಲಿನ ಅನುಭವ ಮಂಟಪದಲ್ಲಿ ನಡೆಯುವ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ದಿವ್ಯ ಸಾನಿಧ್ಯ ವಹಿಸುವರು. ಮುಖ್ಯಅತಿಥಿಗಳಾಗಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸುವರು. ಬೆಂಗಳೂರು ಐಪಿಸಿ ಚರ್ಚ್ನ ಮಾಜಿ ಅಧ್ಯಕ್ಷ ರೆವರೆಂಡ್ ಟಿ.ಡಿ.ಥಾಮಸ್ ಮತ್ತು ಎಸ್ಸೆಸ್ಸೆಫ್ ಚಿತ್ರದುರ್ಗ ಜಿಲ್ಲಾಧ್ಯಕ್ಷ ಜುನೈದ್ ಸಖಾಫಿ ಎಂ.ಎಸ್.ಎಂ. ಹಾಗೂ ತುಮಕೂರಿನ ಉದ್ಯಮಿ ವೆಂಕಟೇಶ್ ಲಾಡ್ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos